Advertisement

ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

04:22 PM May 21, 2021 | Team Udayavani |

ಮಂಡ್ಯ: ಆಧುನಿಕ ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಇಂದು ನಿಧನರಾಗಿದ್ದಾರೆ.

Advertisement

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚೈನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿದ್ದರು. 1996ರಲ್ಲಿ ಸೋಲಿಲ್ಲದ ಸರದಾರರಾಗಿದ್ದ ಮತ್ತೊಬ್ಬ ಗಾಂಧಿಯಾಗಿದ್ದ ಮಾಜಿ ಸಂಸದ ಜಿ.ಮಾದೇಗೌಡರನ್ನು ಸೋಲಿಸಿ ಸಂಸದರಾಗಿದ್ದರು.

1988ರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ಕೆ.ಆರ್.ಪೇಟೆ ತಾಲೂಕಿನ ಮೊದಲ ಸಚಿವರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದರು.

Advertisement

ಕಳೆದ 2014ರಲ್ಲಿ ಜೆಡಿಎಸ್ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದ ಬೇಸತ್ತಿದ್ದರು. 2018 ವಿಧಾನಸಭೆ ಚುನಾವಣೆಯಿಂದ ದೂರ ಉಳಿದಿದ್ದರು. ಕಾಂಗ್ರೆಸ್ ಪಕ್ಷದಲ್ಲಿದ್ದರು.

ಇವರ ಅಂತ್ಯಕ್ರಿಯೆ ಕೆ.ಆರ್.ಪೇಟೆ ತಾಲೂಕಿನ ಕೈಗೋನಹಳ್ಳಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next