Advertisement
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜಕೀಯ ನಿವೃತ್ತಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ ಕೃಷ್ಣ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಯಾವುದೇ ಪಕ್ಷವನ್ನು ಸೇರುವುದಿಲ್ಲ. ಯಾರನ್ನೂ ಬೆಂಬಲಿಸುವುದಿಲ್ಲ. ಇರುವವರಲ್ಲಿ ಯೋಗ್ಯರಿಗೆ ಮತ ನೀಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
Related Articles
Advertisement
ರಾಜಕೀಯ ಹೆಜ್ಜೆಗಳು ಕೆ.ಆರ್.ಪೇಟೆ ತಾಲೂಕು ಸಂತೇಬಾಚಹಳ್ಳಿ ಹೋಬಳಿಯ ಕೊತ್ತಮಾರನಹಳ್ಳಿ ಕೃಷ್ಣ ಅವರು 1983ರ ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದರು. ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಕೃಷ್ಣ ಅವರ ವಿರುದ್ಧ ತಾಲೂಕು ಬೋರ್ಡ್ ಅಧ್ಯಕ್ಷ ಬಳ್ಳೇಕೆರೆ ಎಂ.ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು. 1985ರಲ್ಲಿ ಎದುರಾದ ಮಧ್ಯಂತರ ಚುನಾವಣೆಯಲ್ಲಿ ಅದೇ ಪುಟ್ಟಸ್ವಾಮಿ ಗೌಡರ ವಿರುದಟಛಿ ಸ್ಪರ್ಧಿಸಿ 43,817 ಮತಗಳ ಅಂತರದಿಂದ ದಿಗ್ವಿಜಯ ಸಾಧಿಸುವ ಮೂಲಕ ಕೃಷ್ಣ ಅವರು ಚುನಾವಣಾ ಸೇಡು ತೀರಿಸಿಕೊಂಡರು.1989ರ ಚುನಾವಣೆಯಲ್ಲಿ ಸೋಲನುಭವಿಸಿದ ಕೃಷ್ಣ ಅವರು ಮತ್ತೆ1994ರಲ್ಲಿ ಜನತಾ ಪರಿವಾರದಿಂದ ಕಣಕ್ಕಿಳಿದು ಗೆಲುವಿನ ನಗೆ ಬೀರಿದರು. 2004ರಲ್ಲಿ ಮತ್ತೂಮ್ಮೆ ವಿಧಾನಸಭೆಗೆ ಆಯ್ಕೆಯಾಗುವ ಕೃಷ್ಣ ಅವರು, 2008ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೃಷ್ಣ ಅವರು ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 2013ರ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 37 ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸೇರಿ ಸಕ್ರಿಯವಾಗಿ ರಾಜಕಾರಣದಿಂದ ದೂರವೇ ಉಳಿದಿದ್ದರು.