ಸುವರ್ಣಸೌಧ (ಬೆಳಗಾವಿ): “ನೀವು ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ” ಇದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತುಗಳು.
ಎಂಇಎಸ್ ಪುಂಡಾಟಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಹೋದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ” ಎಂದು ಹೇಳಿ ಕೈಮುಗಿದು ಹೊರಟರು.
ಇದನ್ನೂ ಓದಿ:ಕನ್ನಡ ಬಾವುಟಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು!
ಆಕ್ಷೇಪಾರ್ಹ ಮಾತುಗಳನ್ನಾಡಿದ್ದ ರಮೇಶ್ ಕುಮಾರ್: ಕಳೆದ ವಾರ ಸದನದಲ್ಲಿ ಬೆಳೆವಿಮೆ ಚರ್ಚೆ ಸಂದರ್ಭದಲ್ಲಿ ಎಲ್ಲರಿಗೂ ಮಾತನಾಡಲು ಅವಕಾಶ ಕೊಟ್ಟ ಸ್ಪೀಕರ್ ನಡೆ ಬಗ್ಗೆ ಮಾತನಾಡುವಾಗ ಅವರು ಆಡಿದ ಮಾತುಗಳು ರಾಷ್ಟ್ರಾದ್ಯಂತ ಆಕ್ರೋಶ ಉಂಟು ಮಾಡಿತ್ತು. ಸದನದಲ್ಲಿ ಎಲ್ಲರೂ ಮಾತನಾಡಲು ಆರಂಭಿಸಿದರೆ ಏನು ಮಾಡುವುದು, ಲೆಟ್ ಅಸ್ ಎಂಜಾಯ್ ದ ಸಿಚುವೇಷನ್ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದಾಗ ಎದ್ದು ನಿಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ‘there is a saying, When rape is inevitable, lie down and enjoy it’ (ಅತ್ಯಾಚಾರ ತಡೆಯಲು ಸಾಧ್ಯವಿಲ್ಲವೆಂದರೆ ಮಲಗಿ ಆನಂದಿಸಿ) ಎಂದರು. ರಮೇಶ್ ಕುಮಾರ್ ಅವರ ಹೇಳಿಕೆ ಹೊರಬರುತ್ತಿದ್ದಂತೆ ರಾಷ್ಟ್ರಮಟ್ಟದಲ್ಲಿ ಮಹಿಳೆಯರಿಂದ, ಚಿಂತಕರಿಂದ ತೀವ್ರ ವಿವಾದವುಂಟಾಯಿತು.