Advertisement

Hospitalised: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

09:59 AM Dec 08, 2023 | sudhir |

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಗುರುವಾರ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಎರ್ರವಳ್ಳಿ ಫಾರ್ಮ್ ಹೌಸ್ ನಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡ ಅವರನ್ನು ಗುರುವಾರ ಮಧ್ಯರಾತ್ರಿ ಸೋಮಾಜಿಗುಡ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ತಪಾಸಣೆ ಬಳಿಕ ಸೊಂಟದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇನ್ನಷ್ಟು ಪರೀಕ್ಷೆ ನಡೆಸಲು ಬಾಕಿ ಇದ್ದು ಆ ಬಳಿಕ ಶಸ್ತ್ರಚಿಕಿತ್ಸೆಯ ಅಗ್ಯತ್ಯದ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಸದ್ಯ ಆಸ್ಪತ್ರೆಯಲ್ಲಿ ಚಂದ್ರಶೇಖರ ರಾವ್ ಕುಟುಂಬ ಸದಸ್ಯರು ಇದ್ದಾರೆ.

ಇದನ್ನೂ ಓದಿ: Mumbai: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ

Advertisement

Udayavani is now on Telegram. Click here to join our channel and stay updated with the latest news.

Next