Advertisement

ವೆಂಟಿಲೇಟರ್ ನಲ್ಲಿ ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ, ಏಮ್ಸ್ ಗೆ ವೆಂಕಯ್ಯ ನಾಯ್ಡು ಭೇಟಿ

08:29 AM Aug 12, 2019 | Sriram |

ಹೊಸದಿಲ್ಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಏಮ್ಸ್ ಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಪಕ್ಷದ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

Advertisement

ತಮ್ಮ ಎಡಗಾಲಿನ ಕ್ಯಾನ್ಸರ್‌ ನಿಂದ ಬಳಲುತ್ತಿರುವ ಜೇಟ್ಲಿ ಅವರು ಜನವರಿಯಲ್ಲಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಫೆಬ್ರವರಿ 9ರಂದು ಭಾರತಕ್ಕೆ ಮರಳಿದ್ದರು. ಈ ಸಂದರ್ಭ ಕೇಂದ್ರ ಬಜೆಟ್ ಅನ್ನು ಪಿಯೂಷ್ ಗೋಯಲ್ ಮಂಡಿಸಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು. ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರಕಾರದಲ್ಲಿ ತಮ್ಮ ಅನಾರೋಗ್ಯದ ಕಾರಣವೊಡ್ಡಿ ಜೇಟ್ಲಿ ಮಂತ್ರಿ ಪದವಿ ನಿರಾಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next