Advertisement

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

10:52 AM May 21, 2021 | Team Udayavani |

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ  ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣ ಪ್ರದೇಶ ಮತ್ತು ಉದ್ಯೋಗ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.

ತಮ್ಮ ಕ್ಷೇತ್ರದ ಅಭಿವೃದ್ಧಿಯಲ್ಲಿಯೂ ಅವರು ಗಣನೀಯ ಕೊಡುಗೆ ನೀಡಿದ್ದರು. ಅವರ ನಿಧನದಿಂದ ರೈತಪರ ಕಾಳಜಿ ಹೊಂದಿದ್ದ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ.  ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ  ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ವಿಧಿವಶ

ಸಚಿವ ಮುರುಗೇಶ್ ನಿರಾಣಿ ಸಂತಾಪ: ರೈತ ನಾಯಕ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.

Advertisement

ಒಂದು ಕಾಲದಲ್ಲಿ ಕರ್ನಾಟಕದ ದೊಡ್ಡ ರೈತ ನಾಯಕರಾಗಿ ಗುರುತಿಸಿಕೊಂಡಿದ್ದ ಬಾಬಾಗೌಡ ಪಾಟೀಲ್ ಅವರ ಹಠಾತ್ ನಿಧನ ರೈತ ಸಮುದಾಯದಕ್ಕೆ ದೊಡ್ಡ  ಹಿನ್ನಡೆ. ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಗಮನ ಸೆಳೆದಿದ್ದರು. ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ವಾಜಪೇಯಿ ಸಂಪುಟ ದರ್ಜೆ ಸಚಿವರಾಗಿ ಗೆದ್ದಿದ್ದರು.

ರೈತ ಹೋರಾಟದಿಂದ ಪ್ರಬಲ ನಾಯಕರಾಗಿ ಬೆಳೆದ ಬಾಬಾಗೌಡ ಪಾಟೀಲ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ  ನೀಡಿ, ಅವರ  ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಿರಾಣಿ ಅವರು ಪ್ರಾಥಿ೯ಸಿದ್ದಾರೆ.

ಬಿ.ಸಿ.ಪಾಟೀಲ್ ಕಂಬನಿ:  ರೈತ ಹೋರಾಟದಿಂದ ಪ್ರಬಲ ನಾಯಕರಾಗಿದ್ದ  ಬಾಬುಗೌಡರ ನಿಧನ ರಾಜ್ಯಕ್ಕೆ ಹಾಗೂ ರೈತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಆತ್ಮಕ್ಕೆ ಶಾಂತಿ  ನಿಧನದ ದುಃಖ ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಬಿ.ಸಿ.ಪಾಟೀಲ್‌ ಹೇಳಿದ್ದಾರೆ.

ಇದನ್ನೂ ಓದಿ:  ಯುಕೆ: 2 ತಿಂಗಳು ಕೋಮಾದಲ್ಲಿದ್ದು ಪವಾಡ ಸದೃಶ ಬದುಕುಳಿದ ಭಾರತೀಯ ಮೂಲದ ವೈದ್ಯೆ

Advertisement

Udayavani is now on Telegram. Click here to join our channel and stay updated with the latest news.

Next