Advertisement

ಕೇಂದ್ರ ಮಾಜಿ ಸಚಿವ, ಬಿಜೆಪಿ ಮುಖಂಡ ದಿಲೀಪ್ ಗಾಂಧಿ ಕೋವಿಡ್ ನಿಂದ ಸಾವು

12:51 PM Mar 17, 2021 | Nagendra Trasi |

ನವದೆಹಲಿ: ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ಕೇಂದ್ರ ಮಾಜಿ ಸಚಿವ, ಬಿಜೆಪಿ ಮುಖಂಡ ದಿಲೀಪ್ ಗಾಂಧಿ (69ವರ್ಷ) ಬುಧವಾರ (ಮಾರ್ಚ್ 17) ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ದಿಲೀಪ್ ಗಾಂಧಿಗೆ ಕೋವಿಡ್ ಸೋಂಕು ಇದ್ದಿರುವುದು ಮಂಗಳವಾರ ಪತ್ತೆಯಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿಲೀಪ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ 3ಗಂಟೆಗೆ ನಿಧನರಾಗಿರುವುದಾಗಿ ವರದಿ ತಿಳಿಸಿದೆ.

ದಿಲೀಪ್ ಗಾಂಧಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ದಿಲೀಪ್ ಅವರು ಬಡವರಿಗೆ ನೆರವು ನೀಡುವ ಹಾಗೂ ಸಮುದಾಯಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

1980ರ ದಶಕದ ಕೊನೆಯಲ್ಲಿ ದಿಲೀಪ್ ಗಾಂಧಿ ಕಾರ್ಪೋರೇಟರ್ ಆಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ಮಹಾರಾಷ್ಟ್ರದ ಅಹ್ಮದನಗರದಿಂದ ಮೂರು (1996ರಿಂದ) ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಿಲೀಪ್ ಬಿಜೆಪಿ ಟಿಕೆಟ್ ಅನ್ನು ನಿರಾಕರಿಸಿದ್ದರು. 2003ರಲ್ಲಿ ವಾಜಪೇಯಿ ಸರ್ಕಾರದಲ್ಲಿ ದಿಲೀಪ್ ಹಡಗು ಸಚಿವಾಲಯದಲ್ಲಿ ಕಾರ್ಯನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next