Advertisement

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ

12:51 PM Sep 27, 2020 | keerthan |

ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ರವಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.

Advertisement

ಜಸ್ವಂತ್ ಸಿಂಗ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.

ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ( 1980, 1986, 1998, 1999, 2004) ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. (1990, 1991,1996, 2009). ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.

ಇದನ್ನೂ ಓದಿ:“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

Advertisement

ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿದ್ದು, ನಂತರ ರಾಜಕೀಯದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ನಿಧನದ ವಾರ್ತೆ ಕೇಳಿ ದುಃಖವಾಯಿತು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next