ದೇವನಹಳ್ಳಿ: ಕೇಂದ್ರ, ರಾಜ್ಯ ಸರ್ಕಾರ ರೈತರ, ಸಾಮಾನ್ಯಜನರ, ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಸರ್ಕಾರವಲ್ಲ. ಎಲ್ಲಾ ವರ್ಗಗಳ ಅಭಿವೃದ್ಧಿ ಕಾಂಗ್ರೆಸ್ಸಿ ನಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಕಾಂಗ್ರೆಸ್ ಅಧಿ ಕಾರ ದಲ್ಲಿದ್ದಿದ್ದರೆ ಇಷ್ಟೊತ್ತಿಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ಮುಗಿಸಿ ನೀರು ಹರಿಯುತ್ತಿತ್ತು ಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯಿಲಿ ತಿಳಿಸಿದರು.
ಬೆಂ.ಗ್ರಾ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರ ಆಯ್ಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ನೂತನ ಉಪಾಧ್ಯಕ್ಷ ದ್ಯಾವರಹಳ್ಳಿ ವಿ. ಶಾಂತಕುಮಾರ್ ಅವರಿಗೆ ಆದೇಶಪತ್ರ ವಿತರಿಸಿ ಮಾತ ನಾಡಿ, ಬಯಲುಸೀಮೆಯ ಪ್ರದೇಶದ ಜನರಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ದೃಷ್ಟಿಯಿಂದ ಎತ್ತಿನಹೊಳೆ ಯೋಜನೆ ಜಾರಿಗೆ ತರಲಾಗಿದ್ದು, ಕಾಂಗ್ರೆಸ್ ಸರ್ಕಾರ ಇದ್ದಾಗ 13 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದಮೇಲೆ ಎತ್ತಿನಹೊಳೆ ಯೋಜನೆ ಕುಂಠಿತಗೊಂಡಿದೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತನ್ನಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಾಗವಾರ ಮತ್ತು ಹೆಬ್ಟಾಳ ಶುದ್ಧೀಕರಿಸಿದ ನೀರನ್ನು ಈ ಭಾಗದ ಕೆರೆಗಳಿಗೆ ಹರಿಸುವ ಭಗೀರಥ ಯೋಜನೆಯನ್ನು ಜಾರಿಗೆ ತಂದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಪಕ್ಷವನ್ನು ಸಂಘಟಿಸಿ ನಾಲ್ಕು ತಾಲೂಕುಗಳಲ್ಲೂ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ನೂತನ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್ ಪಕ್ಷವನ್ನು ಸಂಘಟಿಸಬೇಕು. ಪ್ರತಿ ಬೂತ್‌ಮಟ್ಟದಲ್ಲಿ ಪಕ್ಷವನ್ನು ಸದೃಢವಾಗಿ ಬಲಪಡಿಸಬೇಕು ಎಂದರು.
ಪಠ್ಯಪುಸ್ತಕಗಳ ಪರಿಷ್ಕರಣೆ ಹೆಸರಲ್ಲಿ ಮಕ್ಕಳ ಹೃದಯದಲ್ಲಿ ಕೋಮುಭಾವನೆ ಬಿತ್ತುವ ಕೆಲಸ ಬಿಜೆಪಿ ಮಾಡುತ್ತಿದೆ. ಮನುಷ್ಯನೇ ಸರಿಯಿಲ್ಲ ಎಂದ ಮೇಲೆ ಅವನು ಕೊಟ್ಟ ವರದಿ ಹೇಗೆ ಸರಿ ಇರಲು ಸಾಧ್ಯವೆಂದು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಲೋಹಿತ್ ಚಕ್ರತೀರ್ಥನ ವಿರುದ್ಧ ಮೊಯಿಲಿ ಕಿಡಿಕಾರಿದರು.
ಬೂತ್‌ಮಟ್ಟದಿಂದ ಸಂಘಟನೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್ ಮಾತನಾಡಿ, ಪಕ್ಷವು ನಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾ ಣಿಕವಾಗಿ ನಿರ್ವಹಿಸುತ್ತೇನೆ. ನಾಲ್ಕು ತಾಲೂಕುಗಳಲ್ಲಿ ಪಕ್ಷವನ್ನು ಬೂತ್‌ಮಟ್ಟದಿಂದ ಸಂಘಟಿಸಲಾಗುವುದು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿ ಕಾರಕ್ಕೆ ತರಲು ಶ್ರಮಿಸಲಾಗುವುದು. ಜಿಪಂ ಮತ್ತು ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಲು ಶ್ರಮವಹಿಸಲಾಗುವುದು ಎಂದರು.
ಪಕ್ಷ ಸಂಘಟನೆಗೆ ಆದ್ಯತೆ ನೀಡಿ: ವಿಧಾನಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಸರ್ಕಾರವಾಗಿದೆ. ಕೋವಿಡ್ ಸಂದರ್ಭದಲ್ಲಿ ಹೆಣದಲ್ಲೂ ಹಣ ಮಾಡಿದ ಸರ್ಕಾರವಾಗಿದೆ. ಭ್ರಷ್ಟಾಚಾರದಲ್ಲಿ ಬಿಜೆಪಿ ಸರ್ಕಾರ ಮುಳುಗಿದೆ. ನೂತನ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ. ಶಾಂತಕುಮಾರ್ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಶಾಮಪ್ಪ, ಮಾಜಿ ಶಾಸಕ ವೆಂಕಟಸ್ವಾಮಿ, ಮುನಿನರಸಿಂಹಯ್ಯ, ಕೆಪಿ ಸಿಸಿ ಪ್ರಧಾನ ಕಾರ್ಯ ದರ್ಶಿ ಎ. ಸಿ. ಶ್ರೀನಿ ವಾಸ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕು ಮಾರ್, ಪ್ರಧಾನ ಕಾರ್ಯದರ್ಶಿ ಎಸ್. ನಾಗೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ. ಆರ್. ನಾಗೇಶ್, ತೂಬಗೆರೆ ಹೋಬಳಿ ಅಧ್ಯಕ್ಷ ರಂಗಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ.ಪ್ರಸಾದ್, ತಿರುವಂಗ ನಾರಾಯ ಣಸ್ವಾಮಿ ಹಾಗೂ ಮತ್ತಿತರರು ಇದ್ದರು.