Advertisement

ಜನ್ಮದಿನದಂದೇ ಇಹಲೋಕ ತ್ಯಜಿಸಿದ ಹಿರಿಯ ರಾಜಕಾರಣಿ ಎನ್ ಡಿ ತಿವಾರಿ

04:21 PM Oct 18, 2018 | Sharanya Alva |

ನವದೆಹಲಿ:ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ(93ವರ್ಷ) ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಇಂದು ಅವರ 93ನೇ ವರ್ಷದ ಹುಟ್ಟುಹಬ್ಬ.

Advertisement

ನಾರಾಯಣ್ ದತ್ ತಿವಾರಿ ಅವರು ಮೂರು ಬಾರಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಹಿರಿಯ ಕಾಂಗ್ರೆಸ್ ಮುಖಂಡ ತಿವಾರಿ ಅವರು ತಮ್ಮ ಹುಟ್ಟುಹಬ್ಬದ ದಿನವೇ ಇಹಲೋಕ ತ್ಯಜಿಸಿದ್ದಾರೆ. 1925 ಅಕ್ಟೋಬರ್ 18ರಂದು ಜನಿಸಿದ್ದರು.

ಎರಡು ರಾಜ್ಯಗಳ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ದೇಶದ ಏಕೈಕ ರಾಜಕಾರಣಿ ಎನ್ ಡಿ ತಿವಾರಿ. 1976-1977, 1984-85 ಹಾಗೂ 1988-89ರಲ್ಲಿ ಉತ್ತರಪ್ರದೇಶದ ಸಿಎಂ ಆಗಿದ್ದರು. 2002-2007ರವರೆಗೆ ಉತ್ತರಾಖಂಡ್ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. 1986-87ರಲ್ಲಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಚಿವ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2007-2009ರವರೆಗೆ ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next