Advertisement

ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ಅಧಿಕಾರ ಸ್ವೀಕಾರ

07:54 PM Jun 09, 2021 | Team Udayavani |

ನವದೆಹಲಿ: ಉತ್ತರಪ್ರದೇಶದ ಮಾಜಿ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆ ಅವರು ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಬುಧವಾರ(ಜೂನ್ 09) ಅಧಿಕಾರ ಸ್ವೀಕರಿಸಿದರು. ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಏಪ್ರಿಲ್ 12ರಂದು ನಿವೃತ್ತರಾಗಿದ್ದು, ಆ ಬಳಿಕ ಹುದ್ದೆ ತೆರವಾಗಿತ್ತು.

Advertisement

1984ರ ಬ್ಯಾಚ್ ನ ನಿವೃತ್ತ ಐಎಎಸ್ ಅಧಿಕಾರಿ ಅನುಪ್ ಚಂದ್ರ ಪಾಂಡೆ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಿರುವುದಾಗಿ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆ ತಿಳಿಸಿದೆ.

ಪ್ರಸ್ತುತ ಸುಶೀಲ್ ಚಂದ್ರ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ(ಸಿಇಸಿ) ಕಾರ್ಯನಿರ್ವಹಿಸುತ್ತಿದ್ದು, ರಾಜೀವ್ ಕುಮಾರ್ ಚುನಾವಣಾ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಅನೂಪ್ ಚಂದ್ರ ಅವರು ಹಿಂದೆ ಉತ್ತರಪ್ರದೇಶದ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಚುನಾವಣಾ ಆಯೋಗದ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next