ಗುರುಗ್ರಾಮ್: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಸೋಮವಾರ ಮುಂಜಾನೆ ನಿಧನ ಹೊಂದಿದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸೋಮವಾರ ಚಿಕಿತ್ಸೆಗೆ ಸ್ಪಂಧಿಸದೆ ನಿಧನಹೊಂದಿದ್ದಾರೆ.
ಇದನ್ನೂ ಓದಿ : ಜೈಪುರ : ಕಾಲುಂಗುರಕ್ಕಾಗಿ ವೃದ್ಧೆಯ ಪಾದವನ್ನೇ ಕತ್ತರಿಸಿದ ದರೋಡೆಕೋರರು
1939 ನವೆಂಬರ್ 22ರಂದು ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದಲ್ಲಿ ಮುಲಾಯಂ ಜನಿಸಿದರು. 1989ರಲ್ಲಿ ಮೊದಲ ಬಾರಿ ಉತ್ತರಪ್ರದೇಶ ಸಿಎಂ ಆಗಿದ್ದರು. 1996-98ರಲ್ಲಿ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಒಟ್ಟು ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಈ ಮೂಲಕ ದೇಶದ ರಾಜಕೀಯದಲ್ಲಿ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.