Advertisement

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

02:54 PM Aug 31, 2022 | Team Udayavani |

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಇತ್ತೀಚಿನ ವರ್ತನೆಯಿಂದ ಬೇಸತ್ತು ಪಕ್ಷ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯತ್ವ ಆಕಾಂಕ್ಷಿಯಾಗಿದ್ದ ಲಕ್ಷ್ಮಿನಾರಾಯಣ ಅವರಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಮನ್ನಣೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಜತೆಗೂ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಿಜೆಪಿ ಸೇರ್ಪಡೆ ಸಾಧ್ಯತೆಯೂ ಇದೆ.

Advertisement

Udayavani is now on Telegram. Click here to join our channel and stay updated with the latest news.

Next