Advertisement
ಗುರುವಾರ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಯಲ್ಲಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ನಿಷ್ಠಾವಂತರಿಗೆ ಮನ್ನಣೆ ಇಲ್ಲ. ಎಚ್.ಡಿ.ದೇವೇಗೌಡರ ಕುಟುಂಬದ 2-3 ಜನರು ಕೈಗೊಳ್ಳುವ ನಿರ್ಣಯವೇ ಅಂತಿಮ ಎನ್ನುವಂತಿದ್ದು, ಕುಟುಂಬಕ್ಕೆ ಸೀಮಿತ ಪಕ್ಷವಾಗಿದೆ ಹೊರತು ಅದು ಜಾತ್ಯತೀತ ಪಕ್ಷವಾಗಿಲ್ಲ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಜೆಡಿಎಸ್ ಎಂಬುದು ಎಚ್.ಡಿ.ದೇವೇಗೌಡರ ಕುಟುಂಬ ಪಕ್ಷವಾಗಿದೆ ಎಂದು ಬಹಿರಂಗವಾಗಿ ಟೀಕಿಸಿದ್ದರು. ಈಗ ಅದೇ ಕುಟುಂಬ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದರು.
Related Articles
Advertisement
ಅಧಿವೇಶನದಲ್ಲಿ ನಾನು ಕಾಂಗ್ರೆಸ್ ಪರ ಇರುತ್ತಿದ್ದೆ ಎಂಬ ಜೆಡಿಎಸ್‌ನವರ ಆರೋಪ ಸುಳ್ಳು. ನಾನು ವಿಷಯಾಧಾರಿತವಾಗಿ ಬೆಂಬಲ ನೀಡಿದ್ದೇನೆ. ತಮ್ಮದು ರೈತಪರ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ವರಿಷ್ಠರು, ಕೃಷಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಮಂಡನೆ ಸಂದರ್ಭದಲ್ಲಿ ಅಂದಿನ ಆಡಳಿತರೂಢ ಬಿಜೆಪಿ ಸರಕಾರಕ್ಕೆ ಬೆಂಬಲವಾಗಿ ನಿಂತರು. ಆದರೆ ನಾನು ರೈತಪರ ಕಾಳಜಿಯೊಂದಿಗೆ ಆತ್ಮಸಾಕ್ಷಿಗನುಗುಣವಾಗಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದೆ ಎಂದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಶಿಕ್ಷಕರ ಮತದಾರರು, ಹಿತೈಷಿಗಳು, ಬೆಂಬಲಿಗರೊಂದಿಗೆ ಚರ್ಚಿಸಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳಹಿಸಿಕೊಡುತ್ತೇನೆ. ಇನ್ನೆರಡು ದಿನಗಳಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಬಹಿರಂಗಪಡಿಸುತ್ತೇನೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮತ್ತೆ ಸ್ಪರ್ಧೆಗಿಳಿಯುತ್ತೇನೆ ಎಂದರು.