Advertisement
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.ಅವರು ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆಯ ಕಾರ್ಯಕ್ರಮದ ರೂಪುರೇಖೆಗಳ ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಅಧಿಕಾರಿಗಳು ಹಾಗೂ ಸಿಬಂದಿಗಳಿಗೆ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸುವ ಜತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಹೊಂದಿರಬೇಕು ಎಂದರು.
ಪ್ರಸಕ್ತ ವರ್ಷದ ಜನವರಿ 2 ರಿಂದ 14ರ ವರೆಗೆ ನಡೆದ ದ್ವಿತೀಯ ಹಂತದ ಕಾರ್ಯಕ್ರಮದಲ್ಲಿ 1,40,838 ಮಂದಿಗೆ ಸ್ಕ್ರೀನಿಂಗ್ ಮಾಡಲಾಗಿದ್ದು, ಕಫ ಪರೀಕ್ಷೆಯಲ್ಲಿ 19 ಮಂದಿಗೆ ಕ್ಷಯರೋಗದ ಗುಣ ಲಕ್ಷಣಗಳು ಕಂಡು ಬಂದಿದ್ದವು. ಇದರಲ್ಲಿ 4 ಮಂದಿಯಲ್ಲಿ ಕ್ಷಯರೋಗ ಪತ್ತೆ ಮಾಡಿದ್ದು ಒಟ್ಟು 23 ಕ್ಷಯರೋಗದ ಪ್ರಕರಣವನ್ನು ಕಳೆದ ಬಾರಿ ಪತ್ತೆ ಹಚ್ಚಲಾಗಿದೆ. ಈ ಬಾರಿ ತೃತೀಯ ಹಂತದ ಕಾರ್ಯಕ್ರಮದಲ್ಲಿ 403 ತಂಡಗಳು ಹಾಗೂ 806 ಮಂದಿ ಸಿಬಂದಿ ಭಾಗವಹಿಸಲಿದ್ದು ವಿವಿಧ ಚಟುವಟಿಕೆಗಳನ್ನು ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.