Advertisement
ತಾಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಪ್ರಾಣಿ ಸಂಗ್ರಹಾಲಯವನ್ನು ಮಾದರಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಭಾಗದಲ್ಲಿಯೇ ಅತ್ಯುತ್ತಮ ಸಂಗ್ರಹಾಲಯ ಇದಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಪ್ರವಾಸಿಗರನ್ನು ಸಂಗ್ರಹಾಲಯದತ್ತ ಸೆಳೆಯುವ ಪ್ರಯತ್ನ ಸರಕಾರದ್ದಾಗಿದೆ ಎಂದರು.
Related Articles
ಭೂತರಾಮನಹಟ್ಟಿ ಪ್ರಾಣಿ ಸಂಗ್ರಹಾಲಯ ಬೆಳೆಸುವ ಉದ್ದೇಶದಿಂದ ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ತರಿಸಲಾಗುವುದು. ಪ್ರವಾಸಿ ತಾಣವನ್ನಾಗಿ ಮಾಡುವ ಮೂಲಕ ಇದನ್ನು ಅಭಿವೃದ್ಧಿಪಡಿಸಲಾಗುವುದು. ಎರಡು ಹುಲಿಗಳನ್ನು ಬಿಟ್ಟು ಟೈಗರ್ ಸಫಾರಿ ಮಾಡಲಾಗುವುದು. ಜತೆಗೆ 18 ವಿವಿಧ ಪ್ರಕಾರದ ಪ್ರಾಣಿಗಳನ್ನು ಸಂಗ್ರಹಾಲಯದಲ್ಲಿ ಇರಿಸಲಾಗುವುದು. ಉದ್ಯಾನ ಮತ್ತು ಪ್ರಾಣಿ ಸಂಗ್ರಹಾಲಯಕ್ಕೆ ಕುಡಿಯುವ ನೀರು ಪೂರೈಸಲು ಮಾರ್ಕಂಡೇಯ ನದಿಯಿಂದ ನೀರು ಒದಗಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Advertisement