Advertisement
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಸೋಮಶೇಖರ್ ಅವರಿಗೆ ಅಸಾಧ್ಯವಾದದನ್ನು ಸಾಧ್ಯವಾಗಿಸುವ ಶಕ್ತಿಯಿದೆ. ಸಹಕಾರ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದಾರೆ ಎಂದರು.
Related Articles
Advertisement
ಮಾಸ್ತಿ ಭವನ ನಿರ್ಮಾಣಕ್ಕೆ ತೊಂದರೆ ಆಗುತ್ತಿದೆ ಎಂದು ಗಮನಕ್ಕೆ ಬರುತ್ತಿದ್ದಂತೆ ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಇದೊಂದೇ ಅಲ್ಲ ಸಮಸ್ಯೆ ತಿಳಿಯುತ್ತಿದ್ದಂತೆ ಅದನ್ನು ಶೀಘ್ರದಲ್ಲೇ ಪರಿಹರಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದಿದೆ. ನಗರದ ಜನತೆಗೆ ಯಾವುದೇ ತೊಂದರೆಯಾಗದಂತೆ ನಗರದ ಅಭಿವೃದ್ದಿಗಾಗಿ ಒಂದೇ ದಿನ 8 ಸಾವಿರ ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.
ಮಳೆ ಅನಾಹುತ ಗಮನಿಸಿ, ರಾಜಕಾಲುವೆ ದುರಸ್ತಿಗೆ 1500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು ಜನರಿಗೆ ತೊಂದರೆ ಆಗದಂತೆ ಕ್ರಮವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಮುಖ್ಯರಸ್ತೆಗಳನ್ನು ಗುಂಡಿ ಮುಕ್ತ ಮಾಡಿ ಡಾಂಬರೀಕರಣಕ್ಕಾಗಿ 800 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕವಾಗಿ ಸ್ಥಳ ಪರಿಶೀಲನೆ ಮಾಡುವುದಲ್ಲದೆ ಕೆಲಸ ಮಾಡದ ಅಧಿಕಾರಿಗಳನ್ನು ಅಮಾನತು ಕೂಡ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಸಚಿವರು ಶ್ಲಾಘಿಸಿದರು.
30-40 ವರ್ಷದಿಂದ ಗೃಹ ನಿರ್ಮಾಣ ಸಹಕಾರ ಸಂಘಗಳಿಂದ ನಿರ್ಮಾಣವಾದ ಬಡವಾಣೆಗಳಿಗೆ ಬಿಡಿಎ ನೋಟಿಸ್ ನೀಡಿರುವ ಬಗ್ಗೆ ಕೆಲವರು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಿದ್ದಂತೆ ವೇದಿಕೆಯಲ್ಲಿ ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು ಪೂರೈಕೆ, ಮೂಲ ಸೌಕರ್ಯಗಳಿಗೆ ಯಾವುದೇ ತೊಂದರೆ ಮಾಡದಂತೆ ಸೂಚಿಸಿದರು ಎಂದರು.
ಕೆಂಪೇಗೌಡ ಬಡವಾಣೆ ವಿಚಾರದಲ್ಲಿ ರೈತರಿಗೆ ತೊಂದರೆ ಆಗದಂತೆ ಕ್ರಮವಹಿಸಲಾಗುತ್ತದೆ. ಕಾಮಗಾರಿ ಪುರ್ಣ ಮಾಡುವ ಕುರಿತು ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಲಾಗುವುದು. ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳ ಅಭಿವೃದ್ಧಿಗೆ 402 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.