Advertisement
ಈ ವೇಳೆ ಮಾತನಾಡಿದ ಮೋದಿ, “ದೊಡ್ಡ ಪ್ರಮಾಣದ ಎನ್ಟಿಪಿಸಿ ಸಹಯೋಗದೊಂದಿಗೆ ಹಸಿರು ಹೈಡ್ರೋಜನ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸುವ ವಿಶ್ವದ ಕೆಲವೇ ನಗರಗಳಲ್ಲಿ ವಿಶಾಖಪಟ್ಟಣವೂ ಸೇರುತ್ತದೆ. ಈ ಹಸಿರು ಹೈಡ್ರೋಜನ್ ಹಬ್ ಹಲವು ಉದ್ಯೋಗಾವಕಾಶಗಳ ಸೃಷ್ಟಿಸುತ್ತದೆ. ಇದು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಆಂಧ್ರಪ್ರದೇಶದಲ್ಲಿ ಉದ್ಯಾನವನಗಳನ್ನು ಸ್ಥಾಪಿಸಲಾಗುತ್ತಿದೆ. ಈ ದೃಷ್ಟಿಕೋನ ಸಾಕಾರಗೊಳಿಸಲು ಬುಧವಾರ ಕೃಷ್ಣಪಟ್ಟಣಂ ಕೈಗಾರಿಕಾ ಪ್ರದೇಶಕ್ಕೆ ಅಡಿಪಾಯ ಹಾಕಲಾಗಿದೆ” ಎಂದರು.
2047ರ ವೇಳೆಗೆ ಆಂಧ್ರಪ್ರದೇಶವು ಸುಮಾರು 2.5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಹೊಂದಿದೆ. ಆಂಧ್ರದ ಜನರಿಗೆ ಸೇವೆ ಸಲ್ಲಿಸುವುದು ನಮ್ಮ ಗುರಿ. ಈ ಗುರಿಯನ್ನು ಸಾಧಿಸಲು ಕೇಂದ್ರದ ಎನ್ಡಿಎ ಸರ್ಕಾರವು ‘ಸ್ವರ್ಣ ಆಂಧ್ರ 2047’ ಉಪಕ್ರಮವನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರವು ಇಂದು ಲಕ್ಷ ಕೋಟಿ ಮೌಲ್ಯದ ಯೋಜನೆಗಳಲ್ಲಿ ಆಂಧ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಹೇಳಿದ್ದಾರೆ.
Related Articles
“ರೈಲ್ವೆ ಕ್ಷೇತ್ರದಲ್ಲಿ ಆಂಧ್ರಪ್ರದೇಶವು ಶೇ. 100ರಷ್ಟು ವಿದ್ಯುದ್ದೀಕರಣ ಪೂರ್ಣಗೊಳಿಸಿದ ರಾಜ್ಯಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ 70ಕ್ಕೂ ಹೆಚ್ಚು ರೈಲು ನಿಲ್ದಾಣಗಳನ್ನು ‘ಅಮೃತ್’ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತ್ ಸ್ಟೇಷನ್ ಯೋಜನೆ’ಯಡಿ ಆಂಧ್ರಪ್ರದೇಶದ ಜನರ ಅನುಕೂಲಕ್ಕಾಗಿ ಮತ್ತು ಪ್ರಯಾಣಕ್ಕಾಗಿ 7 ವಂದೇ ಭಾರತ್ ರೈಲುಗಳು ಮತ್ತು ಅಮೃತ್ ಭಾರತ್ ರೈಲುಗಳ ನಿರ್ವಹಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Advertisement
ಪ್ರಧಾನಿ ಮೋದಿ, ಸಿಎಂ ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ಬುಧವಾರ ವಿಶಾಖಪಟ್ಟಣಂನಲ್ಲಿ ರೋಡ್ ಶೋ ಆರಂಭಿಸಿದರು. ಬಳಿಕ ಎಯು ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಂಧ್ರಪ್ರದೇಶದ ಜನರ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಧನ್ಯವಾದಗಳು ಎಂದು ಮೋದಿ ತೆಲುಗಿನಲ್ಲಿ ಹೇಳಿದರು.