ವಿಜಯಪುರ ; ಮಹಾರಾಷ್ಟ್ರ ಗಡಿಯಲ್ಲಿನ ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನ ರಭಸದ ಹರಿವಿಗೆ ಸಿಕ್ಕು ಕೊಚ್ಚಿಹೋಗಿದ್ದು, ಶವಗಳಿಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ.
ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ (13), ವಿಠ್ಠಲ (10), ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ (14), ಅರ್ಪಿತಾ(13) ನೀರುಪಾಲಾದ ಮಕ್ಕಳು.
ಇದನ್ನೂ ಓದಿ: ನವಿ ಮುಂಬಯಿ ಮನಪಾದಿಂದ ಟೆಂಡರ್ ವಿಸ್ತರಣೆ
ಆರತಿ ಮೃತದೇಹ ಮಾತ್ರ ಪತ್ತೆಯಾಗಿದ್ದು, ಉಳಿದ ಮೂವರ ಮೃತ ದೇಹಕ್ಕಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಹಿರಿಯರು ಕೆಲಸದಲ್ಲಿ ತೊಡಗಿದ್ದಾಗ ಮಕ್ಕಳು ಭೀಮಾ ನದಿಗೆ ಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಹರಿವಿದ್ದ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿ ಹೋಗಿದ್ದಾರೆ.
ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.