ಬೆಂಗಳೂರು: ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ.
ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಹಾಗೂ ವಿಜಯಪುರ ಒಳಗೊಂಡ ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಪಿ.ರಾಜೀವ, ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಶಶಿಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದ್ದು, ಸಂಯೋಜಕರಾಗಿ ವಿಧಾನ ಪರಿಷತ್ ಸದಸ್ಯ ಪಿ.ರವಿಕುಮಾರ ಅವರನ್ನು ನೇಮಿಸಲಾಗಿದೆ.
ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಶಾಸಕ ಅಭಯ ಪಾಟೀಲ್, ಚಿದಾನಂದಗೌಡ, ಪ್ರತಾಪ್ ಸಿಂಹ ನಾಯಕ್, ಎಂ.ವೈ.ಸತೀಶ್ ಅವರನ್ನು ನೇಮಿಸಿದ್ದು, ಸಂಯೋಜಕರಾಗಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ, ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಡಿ.ಎಸ್. ಅರುಣ್, ಲಿಂಗರಾಜ ಪಾಟೀಲ್, ಭೋಜರಾಜ್ ಕರೂದಿ, ರವಿ ದಂಡಿನ್‌ರನ್ನು ನಿಯೋಜಿಸಲಾಗಿದೆ. ಸಂಯೋಜಕರಾಗಿ ಮಹೇಶ ಟೆಂಗಿನಕಾಯಿ ಅವರಿಗೆ ನೀಡಲಾಗಿದೆ.
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಚ್.ಎಸ್. ಗೋಪಿನಾಥ ರೆಡ್ಡಿ, ಎಂ.ಕೆ. ಪ್ರಾಣೇಶ್, ಪುಟ್ಟಣ್ಣ, ಅ.ದೇವೇಗೌಡ ಅವರನ್ನು ನೇಮಿಸಲಾಗಿದೆ.
ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರನ್ನು ಸಂಯೋಜಕರಾಗಿ ನೇಮಿಸಲಾಗಿದೆ. ಹೆಚ್ಚುವರಿಯಾಗಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಹಾಗೂ ಉಳಿದ ಜನಪ್ರತಿನಿಧಿಗಳು ಈ ತಂಡಗಳಲ್ಲಿ ಇರುತ್ತಾರೆ ಎಂದು ಬಿಜೆಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.