ಕಲಬುರಗಿ: ಆಕ್ಷಿಜನ್ ಕೊರತೆಯುಂಟಾಗಿ ನಾಲ್ವರು ಕೋವಿಡ್ ರೋಗಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ಶನಿವಾರ ( ಮೇ.1) ಸಂಜೆ ನಡೆದಿದೆ.
Advertisement
ಕಲಬುರಗಿ ನಗರದ ಕೆ.ಬಿ.ಎನ್. ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ.
ಕೆ.ಬಿ.ಎನ್. ಆಸ್ಪತ್ರೆಯ ಐಸಿಯು ಘಟಕದಲ್ಲಿ ನಾಲ್ವರು ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಆಕ್ಸಿಜನ್ ಖಾಲಿಯಾಗಿದೆ. ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲೇ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.