Advertisement

ಜಮ್ಮು: ನಾಲ್ವರು ಡ್ರಗ್ ದಂಧೆಕೋರರ ಬಂಧನ

09:23 PM Jul 23, 2022 | Team Udayavani |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪೊಲೀಸರು ಶನಿವಾರ ನಾಲ್ವರು ಡ್ರಗ್ ದಂಧೆಕೋರರನ್ನು ಬಂಧಿಸಿದ್ದಾರೆ ಮತ್ತು ಅವರ ಬಳಿಯಿದ್ದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಕಿಶ್ತ್ವಾರ್‌ನ ವಿವಿಧ ಸ್ಥಳಗಳಿಂದ ನಾಲ್ವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.

ಬಂಧಿತರನ್ನು ಆದಿಲ್ ಹುಸೇನ್, ಮುದಾಸಿರ್ ಹುಸೇನ್, ಸಲ್ಮಾನ್ ಸಜ್ಜದ್ ಕಂಡೂ ಮತ್ತು ಅಫಿಯಾ ತಬಸ್ಸುಮ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಎಫ್‌ಐಆರ್‌ಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next