Advertisement

ಬೆಂಗಳೂರಿನಲ್ಲಿ 10 ಸಾವಿರ ಬೆಡ್, ನಾಲ್ಕು ಕಡೆ ವಿದ್ಯುತ್ ಚಿತಾಗಾರದ ವ್ಯವಸ್ಥೆ: ಶ್ರೀರಾಮುಲು

05:53 PM Jul 03, 2020 | keerthan |

ಬಳ್ಳಾರಿ: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಬೆಡ್ ಮತ್ತು ನಾಲ್ಕು ಕಡೆ ವಿದ್ಯುತ್ ಚಿತಾಗಾರ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಸೋಂಕಿತರ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. ಶವಗಳ ಅಂತ್ಯಸಂಸ್ಕಾರದ ವೇಳೆ ಹಲವೆಡೆ ಗೊಂದಲ, ಆಕ್ಷೇಪಣೆಗಳು ಕೇಳಿ ಬರುತ್ತಿವೆ. ಹೀಗಾಗಿ ಬೆಂಗಳೂರು ನಗರದಲ್ಲಿ ನಾಲ್ಕು ಕಡೆ ವಿದ್ಯುತ್ ಚಿತಾಗಾರಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಮನೆಯಲ್ಲೇ ಚಿಕಿತ್ಸೆ

ಇನ್ನುಮುಂದೆ ಕೋವಿಡ್ ಸೋಂಕಿತ ಎ ಸಿಮ್ಟಮ್ಯಾಟಿಕ್ ಮತ್ತು ಸಣ್ಣ ಪ್ರಮಾಣದ ಮೈಲ್ಡ್ ಲಕ್ಷಣಗಳು ಇರುವವರಿಗೆ ಮನೆಯಲ್ಲೇ ಕ್ವಾರಂಟೈನ್ ನಲ್ಲಿಟ್ಟು ಅಲ್ಲಿಯೇ ಚಿಕಿತ್ಸೆ ನೀಡುವಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Advertisement

ಕೋವಿಡ್ ಸೋಂಕು ಹೆಚ್ಚುತ್ತಿರುವ ಇಂಥಹ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು, ಮಾಸ್ಕ್, ಪಿಪಿಇ ಕಿಟ್ ಖರೀದಿಸುವಲ್ಲಿ ಅವ್ಯವಹಾರವಾಗಿದೆ ಎಂದು ವಿನಾಃಕಾರಣ ಆರೋಪ ಮಾಡುತ್ತಿದ್ದಾರೆ. ಮಾಜಿ ಸಿಎಂ ಆದಂತಹವರಿಗೆ ಇದು ಶೋಭೆಯಲ್ಲ. ರಾಜ್ಯಾದ್ಯಂತ ಆವರಿಸಿರುವ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸಲು ನಮ್ಮೊಂದಿಗೆ ಪ್ರವಾಸಕ್ಕೆ ಬರಬೇಕೆಂದು ಆಹ್ವಾನಿಸುತ್ತೇನೆ ಎಂದು ಸಚಿವ ರಾಮುಲು ಸವಾಲೆಸೆದರು.

ಕೇಂದ್ರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಹ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ. ಇವರು ಆಡಳಿತ ಪಕ್ಷದವರು ಎಲ್ಲಿ ತಪ್ಪು ಮಾಡುತ್ತಾರೆ, ಅವ್ಯವಹಾರ ಮಾಡುತ್ತಾರೆ ಎಂಬುದನ್ನು ಪತ್ತೆಹಚ್ಚಲು ಟೆಲಿಸ್ಕೋಪ್ ಹಾಕಿಕೊಂಡು ಕೂತಿರುತ್ತಾರೆ ಎಂದು ವ್ಯಂಗ್ಯವಾಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಲ್.ಜನಾರ್ಧನ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next