ತೆಲಂಗಾಣ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ರಿಕ್ಷಾಕ್ಕೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಶೇಖರ್ (45), ಅವರ ಮಗ ಯಶವಂತ್ (9) ತಂದೆ ಬಾಲ ನರಸಯ್ಯ (70) ಮತ್ತು ತಾಯಿ ಮನೆಮ್ಮ (62) ಎಂದು ಗುರುತಿಸಲಾಗಿದೆ. ಪತ್ನಿ ಕವಿತಾ ಹಾಗೂ ಮತ್ತೊಬ್ಬ ಮಗ ಅಭಿಲಾಷ್ ಗಂಭೀರ ಗಾಯಗೊಂಡಿದ್ದಾರೆ.
ಶೇಖರ್ ಮನೆಯವರು ಬೆಳಗ್ಗೆ 7 ಗಂಟೆ ಸುಮಾರಿಗೆ ರಿಕ್ಷಾದಲ್ಲಿ ಗಜ್ವೇಲ್‌ನಿಂದ ನಿಜಾಮಾಬಾದ್ ಕಡೆಗೆ ತೆರಳುತ್ತಿದ್ದಾಗ ಅತೀ ವೇಗವಾಗಿ ಬಂದ ಸ್ವಿಫ್ಟ್ ಡಿಸೈರ್ ಕಾರು ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಗಂಭೀರ ಗಾಯಗೊಂಡ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Related Articles
ಇದನ್ನೂ ಓದಿ: Wrestlers Protest; ಮೇ 23 ರಂದು ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್