Advertisement

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

06:40 PM Sep 19, 2024 | Team Udayavani |

ಯಳಂದೂರು : ಚಿರತೆಯನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ನಾಲ್ವರು ರೈತರು ಗಾಯಗೊಂಡಿದ್ದಾರೆ.ಇದೇ ವೇಳೆ ಚಿರತೆಯೂ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆಡಿದೆ.

Advertisement

ತಾಲೂಕಿನ ಮದ್ದೂರು ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಓಡಿಸಲು ತಮ್ಮ ಬಂದೂಕಿನಿಂದ ಗುಂಡನ್ನು ಹಾರಿಸಿದ್ದಾರೆ. ಈ ನಾಲ್ವರಿಗೆ ಗುಂಡು ತಗುಲಿದ್ದು ನಾಲ್ಕು ಜನ ರೈತರು ಗಾಯಗೊಂಡಿದ್ದಾರೆ. ಅಲ್ಲದೆ ಅದಾಗಲೇ ಚಿರತೆಯೂ ಮೃತಪಟ್ಟಿದೆ. ಆದರೆ ಚಿರತೆ ಯಾವುದರಿಂದ ಮೃತಪಟ್ಟಿದೆ ಎಂಬುದು ಇನ್ನು ಖಚಿತವಾಗಿಲ್ಲ.

ಗಾಯಗೊಂಡ ವ್ಯಕ್ತಿಗಳನ್ನು ಇದೇ ಗ್ರಾಮದ ಶಿವು,ರವಿ, ರಂಗಸ್ವಾಮಿ ಹಾಗೂ ಮೂರ್ತಿ ಎಂದು ಗುರುತಿಸಲಾಗಿದೆ.

ಗಾಯಗೊಂಡ ಈ ನಾಲ್ಕು ರೈತರನ್ನು ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೆಗಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆಯು ಸಹಜವಾಗಿಯೇ ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಚಿರತೆಯ ಸಾವಿನ ಸುತ್ತ ಅನುಮಾನಗಳ ಹುತ್ತ: ಚಿರತೆಯು ಅರಣ್ಯ ಇಲಾಖೆಯವರು ಹಾರಿಸಿದ ಗುಂಡಿನಿಂದಲೇ ಮೃತಪಟ್ಟಿದೆ ಅಥವಾ ಅರಣ್ಯದ ಇಲಾಖೆಯವರು ತಮ್ಮ ಸ್ವರಕ್ಷಣೆಗಾಗಿ ಇದರ ಮೇಲೆ ಹಲ್ಲೆ ಮಾಡಿ ಮೃತಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ ಅರಣ್ಯ ಇಲಾಖೆಯವರು ಇದು ಸಹಜವಾಗಿಯೇ ಮೃತಪಟ್ಟಿದೆ ಎಂದು ಹೇಳುತ್ತಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರ ಬಿದ್ದ ಮೇಲೆ ಸತ್ಯ ಬಯಲಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next