ಕನ್ನಡದಲ್ಲಿ ಈ ವಾರ ನಾಲ್ಕು ಚಿತ್ರಗಳು ತೆರೆಗೆ ಬರುತ್ತಿದೆ. ಎಲ್ಲವೂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು. ರಾಜ್ ಬಿ ಶೆಟ್ಟಿ ನಟನೆಯ ರೂಪಾಂತರ, ಸಹದೇವ ಕೆಲವಡಿ ಅವರ ಕೆಂಡ, ವಾಸುದೇವ ಎಸ್.ಎನ್ ಅವರ ರಕ್ತಾಕ್ಷ, ಆಕರ್ಷ್ ನಿರ್ದೇಶನದ ಫ್ಯಾಮಿಲಿ ಡ್ರಾಮಾ ಚಿತ್ರಗಳು ಇಂದು ಬಿಡುಗಡೆಯಾಗಿದೆ.
ರೂಪಾಂತರ
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ರೂಪಾಂತರ ಚಿತ್ರ ಇಂದು ತೆರೆಕಾಣುತ್ತಿದೆ. ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ಮಿಸಿದ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೂಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.
ಕೆಂಡ
“ಕೆಂಡ’ ಚಿತ್ರ ಈ ವಾರ ತೆರೆಕಾಣುತ್ತಿದೆ. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ. ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾ ನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರ ಹಿತಾಸಕ್ತಿಗಳು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆ ಎಂಬುದು ತಂಡದ ಮಾತು. ಬಿ. ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಹೀಗೆ ಬಹುತೇಕ ರಂಗ ಭೂಮಿ ಪ್ರತಿಭೆಗಳೇ “ಕೆಂಡ’ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ರಕ್ತಾಕ್ಷ
“ರಕ್ತಾಕ್ಷ’ ಸಿನಿಮಾ ಇಂದು ತೆರೆಕಾಣುತ್ತಿದೆ. ಈ ಸಿನಿಮಾ ಮೂಲಕ ರೋಹಿತ್ ನಟನಾಗಿ ಎಂಟ್ರಿಕೊಡುತ್ತಿದ್ದಾರೆ. ಕಳೆದ ಆರು ವರ್ಷಗಳಿಂದ ಮಾಡೆಲಿಂಗ್‌ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವಾಸುದೇವ ಎಸ್.ಎನ್ ಎಂಬುವವರು ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ರೂಪಾ ರಾಯಪ್ಪ, ಅರ್ಚನಾ, ಪ್ರಮೋದ್ ಶೆಟ್ಟಿ, ರಚನಾ ದಶರತ್ ನಟಿಸಿದ್ದಾರೆ.
ಫ್ಯಾಮಿಲಿ ಡ್ರಾಮಾ
“ಫ್ಯಾಮಿಲಿ ಡ್ರಾಮಾ’ ಚಿತ್ರ ಇಂದು ತೆರೆಕಾಣುತ್ತಿದೆ. ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾವಿದು. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ ಎಂಟರ್‌ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ. ಇನ್ನೂ ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್ ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇ್ದಾಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು “ಫ್ಯಾಮಿಲಿ ಡ್ರಾಮಾ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದರೆ