Advertisement

Confirm; ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ದೇವೇಗೌಡರ ಗ್ರೀನ್ ಸಿಗ್ನಲ್

11:28 AM Nov 06, 2017 | Sharanya Alva |

ಹಾಸನ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ಸ್ಪರ್ಧೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ಕೊಟ್ಟಿರುವುದಾಗಿ ಭವಾನಿ ರೇವಣ್ಣ ತಿಳಿಸಿದ್ದಾರೆ.

Advertisement

ಸೋಮವಾರ ಹರದನಹಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತನ್ನ ಮಗ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಜ. ಇದಕ್ಕೆ ದೊಡ್ಡವರು(ದೇವೇಗೌಡರು) ಕೂಡಾ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಕ್ಷೇತ್ರ ಯಾವುದು ಎಂಬುದನ್ನು ದೇವೇಗೌಡರು ನಿರ್ಧರಿಸಲಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಬಹುತೇಕ ಬೆಂಗಳೂರಿನ ರಾಜರಾಜೇಶ್ವರಿ ನಗರ ಅಥವಾ ಹಾಸನದ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ದೇವೇಗೌಡರು ನಿರ್ಧರಿಸಲಿದ್ದಾರೆ ಎಂದು ಭವಾನಿರೇವಣ್ಣ ತಿಳಿಸಿದ್ದಾರೆ.

ತಮ್ಮ ಕುಟುಂಬದಿಂದ ಇಬ್ಬರು ಮಾತ್ರ ಚುನಾವಣೆಯಲ್ಲಿ (ಕುಮಾರಸ್ವಾಮಿ, ರೇವಣ್ಣ ) ಸ್ಪರ್ಧಿಸಲಿದ್ದಾರೆ ಎಂಬುದಾಗಿ ದೇವೇಗೌಡರು ಹೇಳಿಕೆ ನೀಡಿದ್ದರು. ಪ್ರಜ್ವಲ್ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next