Advertisement

ನಾಲ್ವರು ಹಿಜ್ಬುಲ್‌ ಉಗ್ರರ ಹತ್ಯೆ

04:10 AM Nov 21, 2018 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಯ ನಾಲ್ವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

Advertisement

ಇಲ್ಲಿನ ನಾದಿಗಾಂ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತು. ಅಷ್ಟರಲ್ಲಿ, ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ನಡೆದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯೋಧರು ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ಯೋಧ ಎಚ್‌.ಸಿ. ವಿಜಯ್‌ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದರು. ಮತ್ತಿಬ್ಬರು ಯೋಧರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next