Advertisement

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

05:10 PM May 16, 2024 | Team Udayavani |

ತಮಿಳುನಾಡು: ಖಾಸಗಿ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ನಾಲ್ವರು ಮೃತಪಟ್ಟು 20 ಕ್ಕೂ ಹೆಚ್ಚು ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುವಿನ ಮಧುರಾಂತಕಂ ಬಳಿ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.

Advertisement

ಟ್ರಕ್ ಒಂದನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ಸು ಗ್ರಾನೈಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಪರಿಣಾಮ ಖಾಸಗಿ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಪದಾಲಂ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, 20 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅವರಿಗೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: 27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Advertisement

Udayavani is now on Telegram. Click here to join our channel and stay updated with the latest news.

Next