Advertisement

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾಲ್ವರ ಹೆಸರು

01:21 AM Dec 25, 2019 | mahesh |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್‌, ಕೆ.ಎಚ್‌. ಮುನಿಯಪ್ಪ ಹಾಗೂ ಬಿ.ಕೆ. ಹರಿಪ್ರಸಾದ್‌ ಅವರ ಹೆಸರನ್ನು ಎಐಸಿಸಿ ವೀಕ್ಷಕರು ಶಿಫಾರಸು ಮಾಡಿದ್ದಾರೆ ಎಂದು ಹೇಳಲಾಗಿದೆ.

Advertisement

ಉಪ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದ ರಿಂದ ರಾಜ್ಯಕ್ಕೆ ಆಗಮಿಸಿ ಪ್ರಮುಖ ನಾಯಕರು, ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ವೀಕ್ಷಕರು ನಾಲ್ವರಲ್ಲಿ ಒಬ್ಬರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲು ಒಲವು ವ್ಯಕ್ತವಾಗಿರುವ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next