ಹೈದರಾಬಾದ್: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್‌ನ ಕುಶೈಗುಡಾ ಪ್ರದೇಶದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ.
ಶುಕ್ರವಾರ (ಮಾ. 24 ) ಈ ಘಟನೆ ನಡೆದಿದ್ದು, ಶನಿವಾರ ( ಮಾ.20 ರಂದು) ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಮೆರಿಕಾದಲ್ಲಿ ಭಾರತೀಯ ಪತ್ರಕರ್ತನ ಮೇಲೆ ಖಲಿಸ್ತಾನಿ ಬೆಂಬಲಿಗರ ಹಲ್ಲೆ, ನಿಂದನೆ
Related Articles
ತಂದೆ, ತಾಯಿ ಹಾಗೂ ಅವರ ಮಕ್ಕಳಿಬ್ಬರು ವಿಷ ಸೇವಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮಕ್ಕಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. (ಇಬ್ಬರೂ ಮಾನಸಿಕ ಅಸ್ವಸ್ಥರಾಗಿದ್ದರು) ಆದರೂ ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿತ್ತು. ಆದರೆ ಮಕ್ಕಳು ಇಬ್ಬರ ಆರೋಗ್ಯ ದಿನೇ ದಿನೇ ಕಳೆದಂತೆ ಬಿಗಾಡಿಸುತ್ತಿತ್ತು. ಇದರಿಂದ ದಂಪತಿ ಖಿನ್ನತೆಗೆ ಒಳಗಾಗಿತ್ತು. ಇದೇ ಕಾರಣದಿಂದ ಈ ರೀತಿ ಮಾಡಿಕೊಂಡಿರಬಹುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕುಶೈಗುಡ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ ವೆಂಕಟೇಶ್ವರಲು ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.