Advertisement

ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ

12:05 PM Aug 11, 2022 | Team Udayavani |

ಕೋಲ್ಕತಾ:ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ತಡರಾತ್ರಿ ಪಶ್ಚಿಮಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

ಪ್ರಾಥಮಿಕ ವರದಿ ಪ್ರಕಾರ, ಘಟನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರು ಒಂದೇ ಕುಟುಂಬದ ಸದಸ್ಯರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಬರ್ಬರ ಹತ್ಯೆಯ ಹಿಂದೆ ದಂಪತಿಯ ಕೈವಾಡ ಇದ್ದಿರುವುದಾಗಿ ಪೊಲೀಸರು ತಿಳಿಸಿದ್ದು, ಪತಿ ಪರಾರಿಯಾಗಿದ್ದು, ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ಮನೆಯ ಒಳಗಿನಿಂದ ರಕ್ತ ಹೊರಗೆ ಹರಿದು ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next