Advertisement

4 ತಿಂಗಳ ಬಳಿಕ ಕಚೇರಿಗೆ ಸಿಎಂ ಪಾರೀಕರ್‌ ಭೇಟಿ

03:45 AM Jan 02, 2019 | Team Udayavani |

ಪಣಜಿ: ಮೇದೋಜೀರಕ ಗ್ರಂಥಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್‌ ಹೊಸ ವರ್ಷದ ದಿನವಾದ ಮಂಗಳವಾರ ತಮ್ಮ ಕಚೇರಿಗೆ ಆಗಮಿಸಿದ್ದಾರೆ. ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಡಿಸಾcರ್ಜ್‌ ಆಗಿ ಗೋವಾಕ್ಕೆ ಆಗಮಿಸಿ ನಾಲ್ಕು ತಿಂಗಳು ಕಳೆದ ಬಳಿಕ ಅವರು ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಬಿಜೆಪಿ ಕಾರ್ಯಕರ್ತರು, ಶಾಸಕರು ಮತ್ತು ಮುಖಂಡರು ಘೋಷಣೆಗಳನ್ನು ಕೂಗುತ್ತಾ, ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮುಖ್ಯಮಂತ್ರಿ ಹಲವು ಇಲಾಖೆಗಳ ಪ್ರಮುಖರ ಜತೆಗೆ ಸಭೆ ನಡೆಸಿದರು. 2018ರ ಆಗಸ್ಟ್‌ನಲ್ಲಿ ಕೊನೆಯ ಬಾರಿಗೆ ಅವರು ಕಚೇರಿಗೆ ಭೇಟಿ ನೀಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next