Advertisement
ಪ್ರಥಮನ ಏಕಾದಶಿಯಂದು ಉಪವಾಸವಿದ್ದು ತಪ್ತ ಮುದ್ರಾಧಾರಣೆ ಮಾಡಿದ ಅನಂತರ ನಾಲ್ಕು ತಿಂಗಳಲ್ಲಿ ನಾಲ್ಕು ತರಹದ ಆಹಾರ ಕ್ರಮ ಸಂಪ್ರದಾಯದಂತೆ ಇದು ನಡೆಯಲಿದೆ.
ಮೊದಲ ತಿಂಗಳ ಆಹಾರ ಕ್ರಮಕ್ಕೆ ಶಾಕವ್ರತ ಎಂದು ಹೆಸರು. ಈ ತಿಂಗಳಲ್ಲಿ ತರಕಾರಿ ಬಳಸುವುದಿಲ್ಲ. ಮಾವು ಹೊರತಾಗಿ ಇತರ ಹಣ್ಣುಗಳನ್ನು ಬಳಸುವುದಿಲ್ಲ. ಪೊನ್ನಂಗೈ ಸೊಪ್ಪು, ತಿಮರೆ ಸೊಪ್ಪು, ಮಾವಿನಕಾಯಿ, ಪಾಪಡ್ಕ ಕಾಯಿಯನ್ನು ಬಳಸುತ್ತಾರೆ.
Related Articles
Advertisement
ಕ್ಷೀರ- ದಧಿವ್ರತಎರಡನೆಯ ತಿಂಗಳ ವ್ರತವನ್ನು ಕ್ಷೀರ ವ್ರತ ಎಂದು ಕರೆಯುತ್ತಾರೆ. ಈ ತಿಂಗಳಲ್ಲಿ ಹಾಲಿನ ಬಳಕೆ ಇಲ್ಲ. ಮೂರನೆಯ ತಿಂಗಳಿನ ವ್ರತ ದಧಿವ್ರತ. ಈ ತಿಂಗಳಲ್ಲಿ ಮೊಸರನ್ನು ಬಳಸುವುದಿಲ್ಲ. ದ್ವಿದಳ ವ್ರತ
ನಾಲ್ಕನೆಯ ತಿಂಗಳ ಆಹಾರ ಕ್ರಮದ ಹೆಸರು ದ್ವಿದಳ ವ್ರತ. ಈ ತಿಂಗಳಲ್ಲಿ ದ್ವಿದಳ ಧಾನ್ಯ ಬಳಕೆಯಾಗುವುದಿಲ್ಲ. ಬೇಳೆ ಮಾತ್ರವಲ್ಲದೆ ಹಸಿ ಮೆಣಸು, ಒಣಮೆಣಸನ್ನು ಬಳಸುವುದಿಲ್ಲ. ಭೂಮಿಯಡಿ ಬೆಳೆಯುವ ಗೆಡ್ಡೆ ಗೆಣಸು, ಬಾಳೆ ದಿಂಡು, ಬಾಳೆಕಾಯಿ, ಬಾಳೆಕೂಂಬೆ ಬಳಸುತ್ತಾರೆ. ಹಣ್ಣುಗಳಲ್ಲಿ ಬಾಳೆ ಹಣ್ಣನ್ನು ಬಳಸಲಾಗುತ್ತದೆ. ಈ ತಿಂಗಳಲ್ಲಿ ಅರಳಿನ ಚಿತ್ರಾನ್ನ, ಪಲ್ಯ, ಅವಲಕ್ಕಿಯ ಪಾಯಸ ಮಾಡುತ್ತಾರೆ. ಯಾವುದೇ ಬೇಳೆ ಬಳಸದ ಕಾರಣ ಕಡಲೆ ಬೇಳೆ ಮಡ್ಡಿ ಮಾಡುವುದಾದರೆ ರವೆಯಿಂದ ಮಡ್ಡಿ ತಯಾರಿಸುತ್ತಾರೆ. ಮೊದಲ ಮತ್ತು ಕೊನೆಯ ತಿಂಗಳಲ್ಲಿ ಗೋಡಂಬಿ, ದ್ರಾಕ್ಷಿ, ಲವಂಚ, ಏಲಕ್ಕಿಯಂತಹ ಪರಿಮಳ ದ್ರವ್ಯಗಳನ್ನು ಬಳಸುವುದಿಲ್ಲ.