Advertisement

ನಾಲ್ವರು ನಕ್ಸಲರ ಹತ್ಯೆ

06:21 AM Mar 27, 2019 | mahesh |

ರಾಯ್‌ಪುರ: ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಆರ್‌ಪಿಎಫ್ ಯೋಧರು ಚಿಂತಲ್ನಗರ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಗ್ಗೆ 6 ಗಂಟೆಗೆ ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ಇಬ್ಬರು ಮಹಿಳೆಯರು ಸಹಿತ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು. ಎನ್‌ಕೌಂಟರ್‌ ನಡೆದ ಸ್ಥಳದಿಂದ ಒಂದು ಇನ್ಸಾಫ್ ರೈಫ‌ಲ್‌, ಎರಡು 303 ರೈಫ‌ಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next