ಗದಗ: ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ.1ರ ವ್ಯಾಪ್ತಿಯ ಎಸ್.ಎಂ. ಕೃಷ್ಣಾ ನಗರ ಸೇರಿದಂತೆ ಹೊಸದಾಗಿಕೋವಿಡ್-19 ಪ್ರಕರಣಗಳು ದೃಢಪಟ್ಟಿರುವ ನಾಲ್ಕು ಪ್ರದೇಶಗಳನ್ನು ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ್ ಝೋನ್)ವನ್ನಾಗಿ ಘೋಷಿಸಿ, ಸಾರ್ವಜನಿಕರ ಸಂಚಾರ ನಿಷೇಧಿ ಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಎಸ್.ಎಂ.ಕೃಷ್ಣಾ ನಗರದ 100 ಮೀ ಪ್ರದೇಶವನ್ನು ನಿಯಂತ್ರಿತ(ಕಂಟೇನ್ಮೆಂಟ್) ಪ್ರದೇಶ ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿಮೀ ವ್ಯಾಪ್ತಿಯ ಸುತ್ತಲಿನ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ. ಗದಗ ಬೆಟಗೇರಿ ನಗರಸಭೆಯ ಕಿರಿಯ ಅಭಿಯಂತರ ಎಚ್.ಎ.ಬಂಡಿವಡ್ಡರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ರೋಣ ತಾಲೂಕಿನ ಕುರಡಗಿ ಗ್ರಾಮದ ವಾರ್ಡ್ ನಂ. 2ರ ವ್ಯಾಪ್ತಿಯ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಮತ್ತು ಆ ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್‌ಎಂದು ಘೋಷಿಸಿ ರೋಣ ತಾಪಂ ಇಒ ಸಂತೋಷಕುಮಾರ್ ಪಾಟೀಲ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ಶಿರಹಟ್ಟಿ ಪಪಂ ವ್ಯಾಪ್ತಿಯ ವಾರ್ಡ್ ನಂ.6 ರ ವ್ಯಾಪ್ತಿಯಲ್ಲಿ ಬರುವ ಮಟ್ಟಿಭಾವಿ ಪ್ಲಾಟ್, ಆಝಾದ್ ಕಾಲೋನಿ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಲಾಗಿದೆ. ಅದರ ಸುತ್ತಲಿನ 5 ಕಿಮೀ ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಿಸಿ ಶಿರಹಟ್ಟಿ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಪಂ ವ್ಯಾಪ್ತಿಯ ವಾರ್ಡ್ ನಂ.1 ರಲ್ಲಿರುವ ಶಿವಾಜಿನಗರ ಭಾಗದ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಶಿರಹಟ್ಟಿ ತಾಪಂ ಇಒ ನಿಂಗಪ್ಪ ಓಲೇಕಾರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ. ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ
ಕರ್ತರ್ವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್ ಝೋನ್‌ನ ಮೊದಲ ಒಂದು ಕಿಮೀ ವ್ಯಾಪ್ತಿಯಲ್ಲಿ ತೀವ್ರ ಬಫರ್‌ಝೋನ್ ಇರಲಿದ್ದು, ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ ನಡೆಸಲಾಗುವುದು. ಆದೇಶ ಉಲ್ಲಂಘಿಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.