Advertisement

ರಾಜ್ಯದಲ್ಲಿ ಹೊಸ ನಾಲ್ಕು ಪ್ರಕರಣ: ದೇಶದಲ್ಲಿ500 ದಾಟಿದ ಕೋವಿಡ್-19 ಸೋಂಕಿತ ಸಂಖ್ಯೆ

11:11 AM Mar 27, 2020 | keerthan |

ಬೆಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂಗಳವಾರ ಬೆಳಿಗ್ಗೆ ಕರ್ನಾಟಕದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 37ಕ್ಕೇರಿದೆ.

Advertisement

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು ಕರ್ನಾಟಕದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 37ಕ್ಕೇರಿದೆ. ಸೋಂಕಿತರ ವಿವರವನ್ನು ರಾಜ್ಯ ಆರೋಗ್ಯ ಇಲಾಖೆ ಸಂಜೆ ನೀಡಲಿದೆ.

ದೇಶದಲ್ಲಿ ಅತೀ ಹೆಚ್ಚು ಕೋವಿಡ್-19 ಸೋಂಕಿತರು ಇರುವುದು ಮಹಾರಾಷ್ಟ್ರದಲ್ಲಿ. ಇಲ್ಲಿ ಸೋಂಕಿತರ ಸಂಖ್ಯೆ 97ಕ್ಕೇರಿದ್ದು, ಕೇರಳದಲ್ಲಿ 95 ಜನ ಸೋಂಕಿತರಿದ್ದಾರೆ.

ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 500ಕ್ಕೇರಿದೆ. ಇದರಲ್ಲಿ 36 ಜನರು ಗುಣಮುಖರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next