ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸೋಮವಾರ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
25 ವರ್ಷದ ಮಹಿಳೆ ಪಿ-400, 47 ವರ್ಷದ ಮಹಿಳೆ ಪಿ-303, 10 ವರ್ಷ ಬಾಲಕ ಪಿ-404 ಹಾಗೂ 34 ವರ್ಷದ ಮಹಿಳೆ ಪಿ405 ಇವರು ಸೋಂಕುಮುಕ್ತ ಆಗಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಈ ನಾಲ್ವರು ಸೋಂಕು ದೃಢಪಡುತ್ತಲೇ ನಗರದ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೈದ್ಯರು, ದಾದಿಯರ ಸತತ ಪರಿಶ್ರಮದಿಂದ ಸೋಂಕಿತ ರೋಗಿಗಳು ಚಿಕಿತ್ಸೆ ಫಲಕಾರಿಯಾಗಿ ನಿರಂತರ ಬಿಡುಗಡೆಯಾಗುತ್ತಿದ್ದಾರೆ. ಇಂದಿನ ನಾಲ್ವರು ಸೇರಿದಂತೆ ಜಿಲ್ಲೆಯಲ್ಲಿ ಸೋಂಕು ಮುಕ್ತವಾಗಿ 19 ರೋಗಿಗಳು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯ ಸೋಮವಾರ ಮತ್ತೊಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 47 ಕ್ಕೆ ಏರಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸಕ್ರೀಯ 26 ಸೋಂಕಿತರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಪರಿಣಾಮಕಾರಿ ಸ್ಪಂದಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ. ಸಿಇಓ ಗೋವಿಂದರಡ್ಡಿ ತಿಳಿಸಿದ್ದಾರೆ.
ಸೋಂಕುಮುಕ್ತ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಎಸ್.ಎ ಕಟ್ಟಿ, ಡಾ, ಲಕ್ಕಣ್ಣವರ, ಡಾ.ಬಿರಾದಾರ, ಡಾ.ಇಂಗಳೆ, ಡಾ.ಗುಂಡಪ್ಪ, ರವಿ ಕಿತ್ತೂರ, ಅಜಿತ್ ಕೋಟ್ನಿಸ್, ಡಾ.ಶೈಲಶ್ರೀ, ಬಸವರಾಜ ಕಟ್ಟಿಮನಿ, ನಸೀಮಾಬಾನು ಮುಜಾವರ ಇತರರು ಉಪಸ್ಥಿತರಿದ್ದರು.