ಇಸ್ಲಾಮಾಬಾದ್: ಪ್ರಕ್ಷುಬ್ಧ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ ನಾಲ್ವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ನಾಗರಿಕರು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಿಲಿಟರಿಯ ಮಾಧ್ಯಮ ವ್ಯವಹಾರಗಳ ವಿಭಾಗದ ಮುಖ್ಯಸ್ಥರು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲೆಯ ಮೀರ್ ಅಲಿ ತಹಸಿಲ್ ಪ್ರದೇಶದ ಪಟ್ಟಾಸಿ ಚೆಕ್ ಪೋಸ್ಟ್ ಬಳಿ ಭದ್ರತಾ ಪಡೆಗಳ ವಾಹನಕ್ಕೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಆತ್ಮಾಹುತಿ ದಾಳಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಶಹಬಾಜ್ ಷರೀಫ್, ಭಯೋತ್ಪಾದನೆಯ ಪಿಡುಗನ್ನು ಬೇರುಸಹಿತ ಕಿತ್ತೊಗೆಯಲು ಪ್ರಯತ್ನಿಸಬೇಕಿದೆ ಎಂದು ಪುನರುಚ್ಚರಿಸಿದರು.
ದಾಳಿಯನ್ನು ಖಂಡಿಸಿದ ಅವರು, ಭಯೋತ್ಪಾದಕರಿಗೆ ಅವರ ಪೈಶಾಚಿಕ ಕೃತ್ಯಗಳ ಮೂಲಕ ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷರಾಗಿ ಅರುಣ್ ಸಾವೋ ಆಯ್ಕೆ
ಇತ್ತೀಚೆಗೆ ತಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಕದನ ವಿರಾಮದ ಹೊರತಾಗಿಯೂ ಬುಡಕಟ್ಟು ಜಿಲ್ಲೆಗಳಲ್ಲಿ ಉಗ್ರಗಾಮಿಗಳು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಎಂದು ಹೇಳಿದರು.
ಜುಲೈ 4 ರಂದು, ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ಮಾಡಿದಾಗ ಕನಿಷ್ಠ 10 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.