ಲಕ್ನೋ (ಉತ್ತರ ಪ್ರದೇಶ): ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೊಲೀಸ್ ವರಿಷ್ಠಾಧಿಕಾರಿ, ಉಪವರಿಷ್ಠಾಧಿಕಾರಿ ಸೇರಿದಂತೆ ಒಟ್ಟು ನಾಲ್ಕು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ನಾಲ್ವರು ಪೊಲೀಸ್ ಅಧಿಕಾರಿಗಳು ಅಮಾನತಿಗೆ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.
ಎಸ್ಇಟಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಶುಕ್ರವಾರ ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ನೀಡಿತ್ತು. ಇದರ ಆಧಾರದಲ್ಲಿ ಎಸ್ ಪಿ ವಿಕ್ರಾಂತ್ ವೀರ್ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ. ಸದ್ಯ ವಿನೀತ್ ಜೈಸ್ವಾಲ್ ರನ್ನು ಹತ್ರಾಸ್ ಎಸ್ ಪಿಯಾಗಿ ನಿಯೋಜಿಸಲಾಗಿದೆ.
ಇದನ್ನೂ ಓದಿ:ಪಿಎಂಒ ಮೂಲಕವೇ ರಾಯಭಾರಿ, ಹೈಕಮಿಷನರ್ ನೇಮಕಕ್ಕೆ ಕ್ರಮ
ಘಟನೆಯಲ್ಲಿ ಖಂಡಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಶುಕ್ರವಾರ ಜಂತರ್ ಮಂತರ್ ನಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರದಂತೆ ಹಲವು ರಾಜಕೀಯ ಮುಖಂಡರು ಪ್ರತಿಭಟನೆ ನಡೆಸಿದ್ದರು.