Advertisement

ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ : ಮೂವರ ರಕ್ಷಣೆ, ಇನ್ನೂ ಕೆಲವರು ಸಿಲುಕಿರುವ ಶಂಕೆ

05:31 PM Sep 13, 2021 | Team Udayavani |

ನವ ದೆಹಲಿ : 4 ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಉಂಟಾಗಿರುವ ಈ ದುರಂತದಲ್ಲಿ ಈಗಾಗಲೇ ಮೂವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ ಸಿಬ್ಬಂದಿ ಸೇರಿದಂತೆ ದೆಹಲಿ ಪೊಲೀಸರು, ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಘಟನೆ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇದುವರೆಗೆ ನಡೆದ ರಕ್ಷಣೆ ಕಾರ್ಯಾಚರಣೆಯಲ್ಲಿ ಓರ್ವ ವೃದ್ಧ, ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಘಟನೆ ನಡೆದ ಸಂದರ್ಭ ಕಟ್ಟಡದಲ್ಲಿ 4ರಿಂದ 5 ಜನರು ಇದ್ದರು ಎನ್ನಲಾಗಿದೆ. ಅವರೆಲ್ಲರೂ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

Advertisement

ಕಟ್ಟಡ ಕುಸಿಯುವ ವೇಳೆ ಕಟ್ಟಡದ ಬಳಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಕೂಡ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ . ಅದಲ್ಲದೆ ಕಟ್ಟಡದ ಬಳಿ ನಿಲ್ಲಿಸಿದ ಕಾರುಗಳು ಅವಶೇಗಳ ಅಡಿಯಲ್ಲಿ ಸಿಲುಕಿದೆ.

ಘಟನೆ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೇಸರ ವ್ಯಕ್ತಪಡಿಸಿದ್ದಾರೆ,

Advertisement

Udayavani is now on Telegram. Click here to join our channel and stay updated with the latest news.

Next