Advertisement

ಮುಂಬಯಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ ; 2 ಸಾವು

08:51 AM Jul 18, 2019 | Team Udayavani |

ಮುಂಬಯಿ: ಇಲ್ಲಿನ ಡೋಂಗ್ರಿಯಲ್ಲಿ ನಾಲ್ಕು ಮಹಡಿಗಳ ಕಟ್ಟಡ ಕುಸಿತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಸಿದು ಬಿದ್ದಿರುವ ಕಟ್ಟಡದ ಅವಶೇಷಗಳಡಿಯಲ್ಲಿ ಇನ್ನಷ್ಟು ಜನರು ಸಿಲುಕಿರಬಹುದಾದ ಶಂಕೆಯಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

Advertisement

ಘಟನೆಯಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಎರಡು ತಂಡಗಳು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ದುರ್ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳೂ ಸಹ ದೌಡಾಯಿಸಿವೆ.

ಮಹಾರಾಷ್ಟ್ರ ಗೃಹ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಕಟ್ಟಡ ಇದಾಗಿದೆ ಎಂದು ತಿಳಿದುಬಂದಿದೆ. ಡೋಂಗ್ರಿಯಲ್ಲಿರುವ ಅಬ್ದುಲ್ ಹಮೀದ್ ದರ್ಗಾದ ಹಿಂಭಾಗದಲ್ಲಿರುವ ತಾಂಡೇಲ್ ರಸ್ತೆಯಲ್ಲಿದ್ದ ಈ ಕೇಸರಿ ಭಾಯ್ ಹೆಸರಿನ ಕಟ್ಟಡದಲ್ಲಿ 15 ಕುಟುಂಬಗಳು ವಾಸಿಸುತ್ತಿದ್ದವು ಎಂಬ ಮಾಹಿತಿಯೂ ಇದೀಗ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next