Advertisement

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

08:47 PM Jul 06, 2024 | Team Udayavani |

ಕುಲ್ಗಾಮ್( ಜಮ್ಮು ಮತ್ತು ಕಾಶ್ಮೀರ): ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಎರಡು ಪ್ರತ್ಯೇಕ ಕಡೆಗಳಲ್ಲಿ ನಡೆಸಿದ ಕಾರ್ಯಾಚರಣೆಗಳಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಕನಿಷ್ಠ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ.

Advertisement

“ಕುಲ್ಗಾಮ್ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿ ಭಾರೀ ಕಾರ್ಯಾಚರಣೆ ನಡೆಸಿದ್ದಾರೆ.ಇಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹತ್ಯೆಗೀಡಾದವರಲ್ಲಿ ಹಿಜ್ಬುಲ್ ಮುಜಾಯಿದೀನ್ ಟಾಪ್ ಕಮಾಂಡರ್ ಫಾರೂಕ್ ಅಹ್ಮದ್ ಭಟ್ ಕೂಡ ಸೇರಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಕುಲ್ಗಾಮ್ ನ ಮೊಡರ್ಗಾಮ್ ಗ್ರಾಮದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಓರ್ವ ಯೋಧ ಅಸುನೀಗಿದ್ದಾರೆ.

ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next