Advertisement

ಪುಲ್ವಾಮ ಎನ್‌ ಕೌಂಟರ್‌ ಮೂವರು ಉಗ್ರರ ಹತ್ಯೆ

08:45 AM Apr 25, 2018 | Team Udayavani |

ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬಂದಿ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್‌-ಎ- ಮೊಹಮ್ಮದ್‌ ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಆದರೆ, ಈ ಕಾರ್ಯಾಚರ ಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

Advertisement

ಇಲ್ಲಿಯ ತ್ರಾಲ್‌ ಪ್ರದೇಶದ ಲಾಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಉಗ್ರರು ಭದ್ರತಾ ಸಿಬಂದಿ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಸೇನೆ ಅದಕ್ಕೆ ಪ್ರತಿದಾಳಿ ನಡೆಸಿತು. ಕೆಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಅಜಯ್‌ ಕುಮಾರ್‌ ಮತ್ತು ಪೊಲೀಸ್‌ ಪೇದೆ ಲತೀಫ್ ಗುಜ್ರಿ ಹುತಾತ್ಮರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂವರು ಜೈಶ್‌ ಉಗ್ರರನ್ನು ಸದೆಬಡಿಯಲಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next