Advertisement

ಶ್ರೀನಗರ: ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತ

10:16 PM Nov 01, 2022 | Team Udayavani |

ಶ್ರೀನಗರ: ದಕ್ಷಿಣ ಕಾಶ್ಮೀರಲ್ಲಿ ಭದ್ರತಾ ಪಡೆಗಳು ಮಂಗಳವಾರ ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

Advertisement

ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.

ಬಿಜ್ಬೆಹಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಾಲ್ವರು ಉಗ್ರರು ಅನೇಕ ಬಾಂಬ್‌ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೇ ಭದ್ರತಾ ಪಡೆಗಳ ವಿರುದ್ಧ ದಾಳಿ ನಡೆಸಿದ್ದರು.

ಇಂದಿನ ಎನ್‌ಕೌಂಟರ್‌ ಭದ್ರತಾ ಪಡೆಗಳು ನಡೆಸಿದ ಪ್ರಮುಖ ಕಾರ್ಯಾಚರಣೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಎಡಿಜಿಪಿ ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next