Advertisement

Devanahalli ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಮೃತ್ಯು

10:46 PM May 28, 2023 | Team Udayavani |

ದೇವನಹಳ್ಳಿ: ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ಭಾನುವಾರ ವಿಹರಿಸಲು ಬಂದಿದ್ದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ.

Advertisement

ಮೃತರು ಬೆಂಗಳೂರಿನ ಆರ್‌.ಟಿ.ನಗರದ ಶೇಖ್, ತೋಹಿದ್‌, ಶಾಹಿದ್‌, ಫೈಜಲ್​ ಎಂದು ತಿಳಿದು ಬಂದಿದೆ. ನಂದಿಬೆಟ್ಟಕ್ಕೆ ತೆರಳಿದ್ದ ಯುವಕರು ಕೆರೆಯಲ್ಲಿ ಈಜಲು ಇಳಿದಿದ್ದರು ಎಂದು ತಿಳಿದು ಬಂದಿದೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರೂ ಮುಳುಗಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next