Advertisement

ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ: 70 ವರ್ಷದ ವೃದ್ಧ ಸಾವು

02:43 PM Jul 12, 2020 | keerthan |

ಉಡುಪಿ: ಕೋವಿಡ್-19 ಸೋಂಕಿನ ಕಾರಣದಿಂದ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ.

Advertisement

ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಇವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.

ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಾಕಾರಿಯಾಗದೇ ಇವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದರಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಆದರೆ ಆಸ್ಪತ್ರೆಗೆ ದಾಖಲಾಗಿ ನಂತರ ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ.

ಜಿಲ್ಲೆಯಲ್ಲಿ ಶನಿವಾರ 90 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next