Advertisement

Canada: ನಿಜ್ಜಾರ್ ಹತ್ಯೆ ಪ್ರಕರಣ; ನಾಲ್ಕನೇ ಆರೋಪಿ ಬಂಧನ

10:01 AM May 12, 2024 | Team Udayavani |

ಒಟ್ಟಾವ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಕೆನಡಾದ ತನಿಖಾ ಸಂಸ್ಥೆಗಳು ಬಂಧಿಸಿರುವುದಾಗಿ ವರದಿಯಾಗಿದೆ.

Advertisement

ಬಂಧಿತನನ್ನು ಭಾರತೀಯ ಮೂಲದ ಅಮನ್‌ದೀಪ್(22)‌ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಕೊಲೆ ಮತ್ತು ನಿಜ್ಜಾರ್ ಹತ್ಯೆಯ ಪಿತೂರಿ ನಡೆಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಬಂಧಿತ ಅಮನ್‌ದೀಪ್ ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್‌ಫೋರ್ಡ್‌ನಲ್ಲಿ ನೆಲೆಸಿದ್ದ. ಈತನನ್ನು ಈಗಾಗಲೇ ಬೇರೊಂದು ಪ್ರಕರಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಲು ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ಪ್ರಕರಣ ಸಂಬಂಧ ಮೂವರು ಭಾರತೀಯರಾದ ಕರಣ್ ಬ್ರಾರ್ (22), ಕಮಲ್‌ಪ್ರೀತ್ ಸಿಂಗ್ (22) ಹಾಗೂ ಕರಣ್‌ಪ್ರೀತ್ ಸಿಂಗ್ (28) ಎನ್ನುವವರನ್ನು ಬಂಧಿಸಲಾಗಿತ್ತು.

Advertisement

ಹರ್ದೀಪ್ ಸಿಂಗ್ ನಿಜ್ಜಾರ್ ನನ್ನು 2023ರ ಜೂನ್ 18 ರಂದು ಕೆನಡಾದ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅಲ್ಲದೆ ಈ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪವನ್ನು ಮಾಡಿದ್ದರು. ಇದರ ನಂತರ ಈ ವಿಚಾರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಗದ್ದಲದ ಕೇಂದ್ರಬಿಂದುವಾಗಿ ಮಾರ್ಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next