Advertisement
ಬಂಗಾಲಕೊಲ್ಲಿಯ ಚಂಡಮಾರುತದಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಮಳೆಯ ನಿರೀಕ್ಷೆಯನ್ನು ಮೂಡಿಸಿದೆ.
ಕಳೆದ ಡಿಸೆಂಬರ್‌ನಿಂದ ಇಲ್ಲಿಯವರೆಗೆ ಮೂರು ಪ್ರಬಲ ಚಂಡಮಾರುತ ಕರಾವಳಿ ಮೇಲೆ ಪರಿಣಾಮ ಬೀರಿದೆ. ಅದರಲ್ಲಿಯೂ ಡಿಸೆಂಬರ್‌ನಲ್ಲಿ ‘ಓಖೀ’ ಹೆಸರಿನ ಚಂಡಮಾರುತ ದಕ್ಷಿಣ ಭಾರತದ ಕರಾವಳಿಯನ್ನು ಅಪ್ಪಳಿಸಿತ್ತು. ಸಾಕಷ್ಟು ಬೆಳೆನಾಶ ಹಾಗೂ ಪ್ರಾಣ ಹಾನಿಯಾಗಿತ್ತು.
Related Articles
Advertisement
ಮಳೆ ತೀರಾ ಕಡಿಮೆಕಳೆದ ವರ್ಷದ ಸೆಪ್ಟಂಬರ್ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಲಿಲ್ಲ. 2017 ಸೆ. 1ರಿಂದ ಸೆ. 20ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 245.8 ಮಿ.ಮೀ. ಮಳೆಯಾಗಿತ್ತು. ಆದರೆ ಈ ವರ್ಷ ಕೇವಲ 23.6 ಮಿ.ಮೀ. ಮಳೆಯಾಗಿದೆ. ಸಮುದ್ರದ ಮೇಲ್ಮೈ ಸುಳಿಗಾಳಿ
ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದು ತೀವ್ರಗೊಂಡಲ್ಲಿ ದ.ಕ., ಉಡುಪಿ ಸಹಿತ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ.
– ಶ್ರೀನಿವಾಸ ರೆಡ್ಡಿ, ರಾಜ್ಯ ನೈಸರ್ಗಿಕ
ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ