ನವದೆಹಲಿ:ಕೋವಿಡ್ 19 ಸೋಂಕಿನ ನಾಲ್ಕನೇ ಅಲೆಯ ಭೀತಿಯ ನಡುವೆಯೇ ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,303 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 39 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಏಪ್ರಿಲ್ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹರ್ಷ ಕೊಲೆ: ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ಆರೋಪಿಗಳ ಹೈಡ್ರಾಮಾ
ದೇಶದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,23,693ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,980ಕ್ಕೆ ಏರಿಕೆಯಾಗಿದೆ.
24ಗಂಟೆಯಲ್ಲಿ 701 ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಲವಾಗಿದೆ. ಒಂದೇ ದಿನದಲ್ಲಿ 2,563 ಮಂದಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,28,126ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.0.66ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.61ರಷ್ಟಿದೆ. ದೇಶಾದ್ಯಂತ ಹಮ್ಮಿಕೊಂಡ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 188.40 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.